ಸಭಾ ಸೂಚನೆ:
ದಿನಾಂಕ:25/02/2021 ನೇ ಗುರುವಾರದಂದು ಬೆಳಿಗ್ಗೆ 11:00 ಗಂಟೆಗೆ ಉಪನಿರ್ದೇಶಕರ ಕಛೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಕಟ್ಟಡ, ಬಿ.ಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು -04 ಇಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ 2020 – 21ನೇ ಶೈಕ್ಷಣಿಕ ಸಾಲಿನ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕ್ರಿಡಾಕೂಟವನ್ನು ಆಯೋಜಿಸಲು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸುವ ಸಲುವಾಗಿ ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಭೆಯನ್ನು ಕರೆಯಲಾಗಿದ್ದು, ಸದರಿ ಸಭೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಎಲ್ಲಾ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರೊಂದಿಗೆ ಕಡ್ಡಾಯವಾಗಿ ಭಾಗವಹಿಸುವುದು. ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಸಹ ಭಾಗವಹಿಸಲು ಕೋರಲಾಗಿದೆ.
ಉಪನಿರ್ದೇಶಕರು
ಪದವಿ ಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರು ದಕ್ಷಿಣ ಜಿಲ್ಲೆ